ಬೆಂಗಳೂರು : ರಾಜ್ಯದಲ್ಲಿ ಆಪರೇಷನ್ ಹಸ್ತ’ದ ಜೊತೆ ಆಪರೇಷನ್ ‘ಬಿಬಿಎಂಪಿ’ ಕೂಡ ಶುರುವಾಗಿದ್ದು, ಬಿಜೆಪಿಯ ಮಾಜಿ ಕಾರ್ಪೊರೇಟರ್ ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
KRಪುರ ಕ್ಷೇತ್ರದ ಬಿಜೆಪಿಯ ಇಬ್ಬರು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಕಾರ್ಪೊರೇಟರ್ಗಳಾದ ವೀರಣ್ಣ, ಶ್ರೀನಿವಾಸ ಕಾಂಗ್ರೆಸ್ ಸೇರ್ಪಡೆಯಾದರು.
ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆಗಳಾಗುತ್ತಿದ್ದು, ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿ ಬರುತ್ತಿದೆ. ಇದರ ನಡುವೆ ರಾಜ್ಯದಲ್ಲಿ ಆಪರೇಷನ್ ಹಸ್ತ’ದ ಜೊತೆ ಆಪರೇಷನ್ ‘ಬಿಬಿಎಂಪಿ’ ಕೂಡ ಶುರುವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತ ಮಾಡುತ್ತೇವೆ, ಯಾರೇ ಕಾಂಗ್ರೆಸ್ ಪಕ್ಷಕ್ಕೆ ಬಂದ್ರೂ ಸ್ವಾಗತ, ಪಕ್ಷಕ್ಕೆ ಸೇರಿಸಿಕೊಳ್ಳಬೇಕೋ ಅಥವಾ ಬೇಡ್ವಾ ಅಂತ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ನಾವು ಯಾರನ್ನೂ ಕಾಂಗ್ರೆಸ್ ಗೆ ಬನ್ನಿ ಬನ್ನಿ ಎಂದು ಕರೆಯುತ್ತಿಲ್ಲ, ಬಿಜೆಪಿ ಬಿಟ್ಟು ಕಾಂಗ್ರೆಸ್ ಬರುವವರನ್ನು ತಡೆಯೋಕೆ ಆಗಲ್ಲ, ನಿಮ್ಮ ಅಧಿಕಾರಕ್ಕಾಗಿ ಅಂದು ನಮ್ಮ ಸರ್ಕಾರ ಬೀಳಿಸಿಲ್ವಾ..? ಕಾಂಗ್ರೆಸ್ ಗೆ ಬರುವವರನ್ನು ತಡೆಯೋಕೆ ಆಗುತ್ತಾ..? ಎಂದು ಡಿಸಿಎಂ ಡಿಕೆಶಿ ಕೂಡ ಹೇಳಿದ್ದರು.