HomeKarnatakaBIG UPDATE: ಸೆರೆ ಹಿಡಿದ ಚಿರತೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್

BIG UPDATE: ಸೆರೆ ಹಿಡಿದ ಚಿರತೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸ್ಥಳೀಯರನ್ನು ಭಯಭೀತರನ್ನಾಗಿಸಿತ್ತು. ಕಳೆದ ಮೂರು ದಿನಗಳಿಂದ ಜನರು ಮನೆಯಿಂದ ಹೊರಬರಲು ಆತಂಕಪಟ್ಟುಕೊಂಡಿದ್ದರು. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಮೂರು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಸದ್ಯ ಚಿರತೆ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದ ಪಾಳುಬಿದ್ದ ಕಟ್ಟಡದಲ್ಲಿ ಅವಿತು ಕುಳಿತಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸಪಟ್ಟಿದ್ದರು. ಇಂದು ಬೆಳಿಗ್ಗೆ ಚಿರತೆ ಸೆರೆ ಹಿಡಿಯಲು ಮುಂದಾಗಿದ್ದ ವೇಳೆ ಇಬ್ಬರು ಸಿಬ್ಬಂದಿಗಳ ಮೇಲೆ ಚಿರತೆ ದಾಳಿ ನಡೆಸಿತ್ತು. ಡಾ.ಕಿರಣ್ ಹಾಗೂ ಶಾರ್ಪ್ ಶೂಟರ್ ಧನರಾಜ್ ಎಂಬುವವರು ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಅರವಳಿಕೆ ಮದ್ದು ನೀಡಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಬಳಿಕ ಆಪರೇಷನ್ ಚಿರತೆ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಪಟಾಕಿಗಳನ್ನು ಸಿಡಿಸುವ ಮೂಲಕ ಚಿರತೆಯನ್ನು ಬೆನ್ನಟ್ಟಿದ್ದರು. ಈ ವೇಳೆ ಅರಣ್ಯ ಇಲಾಖೆಯ ಬಲೆಗೆ ಚಿರತೆ ಬಿದ್ದಿದೆ. ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular