ನವದೆಹಲಿ: ಪಾಕಿಸ್ತಾನ ಮತ್ತು ಪಿಒಕೆಯ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಒಂದು ದಿನದ ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗ್ ನಿವಾಸದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ದಾಳಿ ನಡೆಸಿದ “ಆಪರೇಷನ್ ಸಿಂಧೂರ್” ಬಗ್ಗೆ ರಾಜಕೀಯ ಪಕ್ಷಗಳಿಗೆ ವಿವರಿಸಲು ಸರ್ಕಾರ ಗುರುವಾರ ಸರ್ವಪಕ್ಷ ಸಭೆ ನಡೆಸಲಿದೆ..