HomeLatest NewsBIG NEWS : 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ : CM ಸಿದ್ದರಾಮಯ್ಯ...

BIG NEWS : ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ : CM ಸಿದ್ದರಾಮಯ್ಯ |Operation Sindoor

ಬೆಂಗಳೂರು : ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. * ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ. * ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ. * ಕಾಶ್ಮೀರದ ಪಹಲ್ಗಾವ್ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. * ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. * ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ. * ಉಗ್ರರ ನೆಲೆಗಳ ಮೇಲೆ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ. * ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. * ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ. * ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. * ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ. * ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular