ಬೆಂಗಳೂರು: ಗಗನಯಾತ್ರಿ ಶುಭಾಂಶು ಶುಕ್ಲ ಅವರೊಂದಿಗೆ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಸಚಿವ ಎನ್.ಎಸ್. ಬೋಸರಾಜು ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ಮನವಿಯಂತೆ ಆಕ್ಸಿಯಂ -4 ಮಿಷನ್ ನ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷ ವಿ. ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೋ ಸಹಯೋಗದಲ್ಲಿ ನೆಹರು ಪ್ಲಾನೆಟೇರಿಯಂ ನಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಶಾಲಾ ವಿದ್ಯಾರ್ಥಿಗಳಿಗೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.