ಸ್ವ ಇಚ್ಛೆಯಿಂದ ʼಗ್ಯಾರಂಟಿʼ ತ್ಯಜಿಸಲು ಅವಕಾಶ: ಮಹತ್ವದ ಹೇಳಿಕೆ ನೀಡಿದ ರೇವಣ್ಣ

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಂದ ಸ್ವಯಂಪ್ರೇರಿತವಾಗಿ ಹೊರಬರಲು ಜನರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರದಂದು ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಲಾಗಿದೆ’ ಎಂದು ಹೇಳಿದರು.

ಕೆಲವರು ಈ ಯೋಜನಯ ಲಾಭ ನಮಗೆ ಬೇಡವಾಗಿತ್ತು ಎಂದು ಸ್ವಯಂ ಪ್ರೇರಿತವಾಗಿ ಹೇಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read