HomeKarnatakaಕರ್ನಾಟಕದ ಮಹತ್ವದ ಯೋಜನೆಗೆ 3 ರಾಜ್ಯಗಳ ವಿರೋಧ: ಡಿಕೆಶಿ ತುರ್ತು ಪತ್ರಿಕಾಗೋಷ್ಠಿ

ಕರ್ನಾಟಕದ ಮಹತ್ವದ ಯೋಜನೆಗೆ 3 ರಾಜ್ಯಗಳ ವಿರೋಧ: ಡಿಕೆಶಿ ತುರ್ತು ಪತ್ರಿಕಾಗೋಷ್ಠಿ

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆ ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇದರ ಭಾಗವಾಗಿ ಆಲಮಟ್ಟಿ ಡ್ಯಾಂ ಅನ್ನು 519 ಮೀಟರ್‌ನಿಂದ 524.256 ಮೀಟರ್‌ಗೆ ಏರಿಕೆ ಮಾಡಲಾಗುತ್ತದೆ.

ಆದರೆ ಕರ್ನಾಟಕದ ಈ ಮಹತ್ವದ ಯೋಜನೆಗೆ ಆಂಧ್ರ ಪ್ರದೇಶ, ಮಹಾರಾಷ್ಟ್ರ ಮತ್ತು ತೆಲಂಗಾಣ ಸರ್ಕಾರಗಳು ವಿರೋಧಿಸುತ್ತಿವೆ. ಈ ಕುರಿತು ಮೂರು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದಿವೆ.

ಈ ಹಿನ್ನಲೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿದರು. ಯುಕೆಪಿ-3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ವಿರೋಧ ವ್ಯಕ್ತಪಡಿಸಿ ಕೇಂದ್ರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಕುಮಾರ ಪಾರ್ಕ್‌ನ ಸರ್ಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದರು.‌

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಹೇಳಿದ್ದೇನು?

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ.
  • ಆಲಮಟ್ಟಿ ಅಣೆಕಟ್ಟುವಿನ 519 ಮೀ. ರಿಂದ 524 ಮೀ.ಗೆ ಎತ್ತರ ಮಾಡಿಕೊಳ್ಳಲು ಖಡಾಖಂಡಿತವಾಗಿ ಅವಕಾಶ ನೀಡಬಾರದು ಮತ್ತು ಗೆಜೆಟ್ ನೋಟಿಫಿಕೇಶನ್ ಮಾಡಬಾರದು ಎಂದು ಆಂಧ್ರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಸರ್ಕಾರ ಈ ವಿಚಾರವಾಗಿ ಮಧ್ಯಪ್ರವೇಶ ಮಾಡುವುದು ಒಳ್ಳೆಯದಲ್ಲ ಎಂದು ಮನವಿ ಮಾಡುತ್ತೇನೆ.
  • 16.09.2025 ರಂದು ಕ್ಯಾಬಿನೆಟ್ ಸಭೆ ಮೂಲಕ 1.33 ಲಕ್ಷ ಎಕರೆ ಭೂಮಿಯನ್ನು ಒಂದೇ ಬಾರಿಗೆ ಸ್ವಾಧೀನ ಪಡಿಸಿಕೊಳ್ಳುವುದು ಎಂದು ತೀರ್ಮಾನಿಸಲಾಗಿದ್ದು. 70 ಸಾವಿರ ಕೋಟಿ ಹಣವನ್ನು ಮೂರು ಹಂತದಲ್ಲಿ ನಿಗದಿ ಮಾಡಿಕೊಳ್ಳಲು ಹೊರಟಿದ್ದೆವು. ಎಕರೆಗೆ 35- 40 ಲಕ್ಷ ಪರಿಹಾರ ನಿಗದಿ ಮಾಡಿದ್ದೆವು. ಭೂಸ್ವಾಧೀನವನ್ನು ಆಂಧ್ರಪ್ರದೇಶ ಸರ್ಕಾರ ಪ್ರಶ್ನಿಸಿದೆ.
  • ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌. ಕಳೆದ 12 ವರ್ಷದಿಂದ ಈ ವಿಚಾರವಾಗಿ ನೋಟಿಫಿಕೇಷನ್ ಮಾಡಿ ಎಂದು ಒತ್ತಡ ಹೇರುತ್ತಲೇ ಇದ್ದೇವೆ. 30.12.2010 ರಲ್ಲಿ ಈ ಬಗ್ಗೆ ತೀರ್ಮಾನವಾಗಿತ್ತು. 177 ಟಿಎಂಸಿಯಿಂದ 330 ಟಿಎಂಸಿ ನೀರು ಬಳಕೆಗೆ ಅವಕಾಶ ನೀಡಲಾಗಿತ್ತು. ಕೆಲವರು ನ್ಯಾಯಾಲಯಕ್ಕೂ ಹೋಗಿದ್ದರು.
  • ನವಿಲೆ ಸಮತೋಲಿತ ಅಣೆಕಟ್ಟು ‌ಕಟ್ಟಿ ನಮ್ಮ ಪಾಲಿನ 30 ಟಿಎಂಸಿ ನೀರನ್ನು ಕೊಳ್ಳಬೇಕು ಎಂದು ಬೋರ್ಡ್ ಮುಂದೆ ತಿಳಿಸಿದ್ದೇವೆ. ಆದರೆ ಅಲ್ಲಿ ಈ ವಿಚಾರವನ್ನು ತೆಗೆದುಕೊಳ್ಳುತ್ತಿಲ್ಲ ಹಾಗೂ ಆಂಧ್ರ ಪ್ರದೇಶದವರು ಈ ಸಭೆಗೆ ಬರುತ್ತಿಲ್ಲ. ಇಬ್ಬರೂ ಸೇರಿ ತೀರ್ಮಾನ ಮಾಡಬೇಕು, ಖರ್ಚು ಮಾಡಬೇಕು. ನಮ್ಮ‌ ನೀರು ಅವರಿಗೆ ಹರಿದು ಹೋಗುತ್ತಿದೆ.
  • ಮಾ. 10 ರಿಂದ ಲೋಕಸಭೆ ಕಲಾಪ ಆರಂಭವಾಗಲಿವೆ. ಅಲ್ಲಿ ನಮ್ಮ ರಾಜ್ಯದ ಸಂಸದರುಗಳು ಪ್ರಧಾನಿಯವರು, ಜಲಶಕ್ತಿ ಸಚಿವರ ಮೇಲೆ ಒತ್ತಡ ಹೇರಬೇಕು. ಎಲ್ಲಾ ಜನನಾಯಕರು ಹಾಗೂ ಸಂಸದರುಗಳು ಸೇರಿ ರಾಜ್ಯದ ಹಿತವನ್ನು ಕಾಪಾಡಲೇ ಬೇಕು. ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀ. ಹೆಚ್ಚಳ ಮಾಡಲು, ರೈತರ ಹಿತ ಕಾಪಾಡಬೇಕು. ಎಲ್ಲಾ ದಾಖಲೆಗಳನ್ನು ಸಂಸದರಿಗೆ ತಲುಪಿಸಲಾಗುವುದು. ನಾವುಗಳು ಸುಮ್ಮನೆ ಕುಳಿತುಕೊಂಡರೆ ರಾಜ್ಯದ ಹಿತಕ್ಕೆ ಧಕ್ಕೆಯಾಗುತ್ತದೆ.
  • ಅನುಮೋದನೆ ಸಿಕ್ಕಿರುವುದನ್ನು ಅನುಷ್ಠಾನಗೊಳಿಸಲು ಮಹಾರಾಷ್ಟ್ರ, ಆಂಧ್ರ ಬಿಡುತ್ತಿಲ್ಲ. ನಾವು ನಮ್ಮ ಜಾಗದಲ್ಲಿ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ಮಾಡುತ್ತಿಲ್ಲ.
  • ಭೂಸ್ವಾಧೀ‌ನಕ್ಕೆ ಏನೂ ತೊಂದರೆ ಆಗಬಾರದೆಂದು, ಅಕಸ್ಮಾತ್ ಏನಾದರೂ ಕೇಂದ್ರ ಸರ್ಕಾರ ಯೋಜನೆ ಮಾಡಬಾರದು ಎಂದು ಪತ್ರ ಬರೆಯುವ ಮುಂಚಿತವಾಗಿ ನಾವು ಮರು ಪ್ರತಿಕ್ರಿಯೆ ನೀಡುತ್ತಿದ್ದೇವೆ. ಅವರು ಪತ್ರ ನೀಡಿದರು ಎಂದರೆ ಅದನ್ನು ತೆಗೆದುಕೊಂಡು ಬೇರೆಯವರು ಮತ್ತೆ ನ್ಯಾಯಲಯಕ್ಕೆ ತೆರಳುತ್ತಾರೆ.
  • ಮಹಾರಾಷ್ಟ್ರದವರು ತಕರಾರು ಮಾಡಿದ್ದರು. ಅವರು ನಮ್ಮಲ್ಲಿ ಪ್ರವಾಹವಾಗುತ್ತದೆ ಎಂದಿದ್ದರು. ಕೇಂದ್ರ ಸರ್ಕಾರದ ಸಮಿತಿ 524 ಮೀ. ಹೆಚ್ಚಳ ಮಾಡಿದರೂ ಪ್ರವಾಹ ಆಗುವುದಿಲ್ಲ ಎಂದು ವರದಿ ನೀಡಿದೆ.
  • ಸುಪ್ರೀಂಕೋರ್ಟ್ ನಿಂದ ಯಾವುದೇ ತರಹದ ತಡೆಯಾಜ್ಞೆಗಳು ಇಲ್ಲ. ಆದರೂ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಅದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೇನೆ.‌ ಇದರ ಪರಿಹಾರಕ್ಕೆ ಸರ್ವಪಕ್ಷ ನಿಯೋಗವನ್ನೇ ಕರೆದುಕೊಂಡು ಹೋಗಬೇಕು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular