HomeKarnatakaವಿರೋಧ ಹಿನ್ನೆಲೆ ಕನ್ನಡ ಭಾಷಾ ಬೋಧನಾ ಅವಧಿ ಪರಿಷ್ಕರಿಸಿದ ಸರ್ಕಾರ: 4 ಗಂಟೆಗೆ ಹೆಚ್ಚಳ

ವಿರೋಧ ಹಿನ್ನೆಲೆ ಕನ್ನಡ ಭಾಷಾ ಬೋಧನಾ ಅವಧಿ ಪರಿಷ್ಕರಿಸಿದ ಸರ್ಕಾರ: 4 ಗಂಟೆಗೆ ಹೆಚ್ಚಳ

ಬೆಂಗಳೂರು: ಕನ್ನಡ ಭಾಷಾ ಬೋಧನಾ ಅವಧಿಯನ್ನು ನಾಲ್ಕು ಗಂಟೆಗೆ ಹೆಚ್ಚಿಸಲಾಗಿದೆ. ರಾಜ್ಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ಒಂದು ವಾರಕ್ಕೆ ಮೂರು ಗಂಟೆಗಳ ಅವಧಿ ನಿಗದಿಪಡಿಸಿದ್ದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಈ ಹಿಂದೆ ಇದ್ದಂತೆ 4 ಗಂಟೆಗಳ ಸಮಯವನ್ನೇ ಮರು ನಿಗದಿಪಡಿಸಲು ಒಪ್ಪಿಕೊಂಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿ ಸೆಮಿಸ್ಟರ್ ನಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ 4 ಗಂಟೆಗಳ ಅವಧಿ ನಿಗದಿಪಡಿಸಲಾಗಿತ್ತು. ರಾಜ್ಯ ಶಿಕ್ಷಣ ನೀತಿಯಲ್ಲಿ ನಾಲ್ಕು ವರ್ಷಗಳ ಪದವಿ ರದ್ದು ಮಾಡಿ ಹಿಂದೆ ಇದ್ದಂತೆ ಮೂರು ವರ್ಷದ ಪದವಿಯನ್ನು ಪುನರ್ ಜಾರಿ ಮಾಡಿದ ನಂತರ ಕನ್ನಡ ಭಾಷಾ ಬೋಧನೆಗೆ ಇದ್ದ ಅವಧಿಯನ್ನು ಮೂರು ಗಂಟೆಗೆ ಇಳಿಸಲಾಗಿತ್ತು.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಬೋಧನಾ ಅವಧಿ ಕಡಿತ ಮಾಡುವುದು ಕನ್ನಡ ಭಾಷೆಗೆ ಮಾಡುತ್ತಿರುವ ಅನ್ಯಾಯವಾಗಿದ್ದು, ಶೀಘ್ರವೇ ಸರಿಪಡಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರು, ಈ ಮೊದಲು ಇದ್ದಂತೆ ನಾಲ್ಕು ಗಂಟೆಗಳಿಗೆ ಮರು ನಿಗದಿ ಮಾಡುವಂತೆ ಎಲ್ಲಾ ವಿವಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬರಗೂರು ರಾಮಚಂದ್ರಪ್ಪ ಅವರ ಕಾಳಜಿ ಬಗ್ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular