BIG NEWS: ರಾಜ್ಯದಲ್ಲೂ ನೀಟ್ ಗೆ ವಿರೋಧ: ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲು ಚರ್ಚೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ನೀಟ್ ಗೆ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿಯೂ ನೀಟ್ ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಬಗ್ಗೆ ಸರ್ಕಾರದಲ್ಲಿ ಗಂಭೀರ ಚರ್ಚೆ ನಡೆದಿದೆ.

ತಮಿಳುನಾಡು ಸರ್ಕಾರ ನೀಟ್ ವಿರುದ್ಧ ಶಾಸನಸಭೆಗಳಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದು, ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ ವಿಧಾನಸಭೆಯಲ್ಲಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಜಾರಿಯಲ್ಲಿರುವ ನೀಟ್ ರದ್ದುಪಡಿಸಿ ಈ ಹಿಂದೆ ಇದ್ದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಸೀಟು ಹಂಚಿಕೆ ಮಾಡಲು ಅವಕಾಶ ನೀಡುವಂತೆ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಚರ್ಚೆ ನಡೆದಿದೆ.

ಪರೀಕ್ಷೆ ಅಕ್ರಮ, ಫಲಿತಾಂಶ ಪ್ರಕಟಣೆಯಲ್ಲಿ ಭಾರಿ ಲೋಪ, ವಿದ್ಯಾರ್ಥಿಗಳು ಮತ್ತು ಪೋಷಕರ ವಲಯದಲ್ಲಿ ಭಾರಿ ಆಕ್ರೋಶ… ಇವೆಲ್ಲವುಗಳ ಬಗ್ಗೆ ಚರ್ಚೆ ನಡೆದಿದ್ದು, ನೀಟ್ ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲು ಚಿಂತನೆ ನಡೆದಿದೆ.

ಸ್ಥಳೀಯ ವಿದ್ಯಾರ್ಥಿಗಳಿಗೆ ಅನ್ಯಾಯ, ರಾಜ್ಯದ ಕಾಲೇಜಿನ ಸೀಟುಗಳು ಅನ್ಯ ರಾಜ್ಯದವರ ಪಾಲಾಗುತ್ತಿರುವುದು. ಪರೀಕ್ಷೆಗೆ ಒತ್ತಡ ಹೀಗೆ ಅನೇಕ ಆರೋಪಗಳು ನೀಟ್ ಬಗ್ಗೆ ಕೇಳಿಬಂದಿವೆ. ಕರ್ನಾಟಕ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಮಾದರಿಯಾಗಿದ್ದು, ಇದರಿಂದ ರಾಜ್ಯದವರಿಗೆ ಹೆಚ್ಚಿನ ಪಾಲು ಸಿಗುತ್ತದೆ. ಸ್ಥಳೀಯರಿಗೆ ಅನುಕೂಲವಾಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ನೀಟ್ ರದ್ದುಪಡಿಸುವ ಬಗ್ಗೆ ನಿರ್ಣಯ ಕೈಗೊಳ್ಳುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read