HomeKarnatakaವರ್ಷಕ್ಕೆ ಮೂರು ಸಲ SSLC, PUC ಪರೀಕ್ಷೆ, ಪ್ರಾಥಮಿಕ ಶಾಲಾ ಶಿಕ್ಷಕರ ನಿಯೋಜನೆಗೆ ಶಾಸಕರ ವಿರೋಧ

ವರ್ಷಕ್ಕೆ ಮೂರು ಸಲ SSLC, PUC ಪರೀಕ್ಷೆ, ಪ್ರಾಥಮಿಕ ಶಾಲಾ ಶಿಕ್ಷಕರ ನಿಯೋಜನೆಗೆ ಶಾಸಕರ ವಿರೋಧ

ಬೆಂಗಳೂರು: ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯನ್ನು ವರ್ಷಕ್ಕೆ ಮೂರು ಸಲ ನಡೆಸಲು ಮತ್ತು ಪರೀಕ್ಷೆಗೆ ಮೇಲ್ವಿಚಾರಕರಾಗಿ ಪ್ರೌಢಶಾಲೆ ಶಿಕ್ಷಕರ ಬದಲು ಪ್ರಾಥಮಿಕ ಶಾಲೆ ಶಿಕ್ಷಕರನ್ನು ನಿಯೋಜಿಸುವ ಆದೇಶ ಹಿಂಪಡೆಯಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನ ಪರಿಷತ್ ನಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಚಿದಾನಂದ ಗೌಡ, ವೈ.ಎ. ನಾರಾಯಣ ಸ್ವಾಮಿ, ಅ. ದೇವೇಗೌಡ, ಮರಿತಿಬ್ಬೇಗೌಡ ಅವರು ಸರ್ಕಾರದ ಆದೇಶದಿಂದ 1.50 ಲಕ್ಷ ಪ್ರೌಢಶಾಲಾ ಶಿಕ್ಷಕರಿಗೆ ಅಪಮಾನ ಮಾಡಿದಂತಾಗಿದ್ದು, ಅವರ ಆತ್ಮಸ್ಥೈರ್ಯ ಕುಗ್ಗಿಸುವಂತಿದೆ. ಮೊದಲಿನಂತೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಪ್ರೌಢಶಾಲೆ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಸಲ ನಡೆಸುವುದು ಸರಿಯಾಗಿಲ್ಲ. ಇದರಿಂದ ಶಿಕ್ಷಕರು ಪರೀಕ್ಷೆ, ಮೌಲ್ಯಮಾಪನ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಾಗುತ್ತದೆ. ಸರ್ಕಾರ ಈ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದ್ದು, ಇದು ಸಮರ್ಪಕವಾಗಿಲ್ಲ ಎಂದು ಅನೇಕ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular