HomeKarnatakaಸಾಗರದಲ್ಲಿ ಅಣು ವಿದ್ಯುತ್ ಸ್ಥಾವರ ಸೇರಿ ಪರಿಸರ ಹಾನಿ ಯೋಜನೆಗೆ ವಿರೋಧ: ಸಂಸದ ಬಿ.ವೈ. ರಾಘವೇಂದ್ರ

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರ ಸೇರಿ ಪರಿಸರ ಹಾನಿ ಯೋಜನೆಗೆ ವಿರೋಧ: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಬಗ್ಗೆ ಜನರು ಆತಂಕ ಪಡುವ ಅವಶ್ಯಕತೆಯಿಲ್ಲ. ‘ಜನರಿಗೆ ಹಾಗೂ ಪರಿಸರಕ್ಕೆ ಹಾನಿಯಾಗುವ ಯೋಜನೆ ಜಾರಿಗೆ ನಮ್ಮ ವಿರೋಧವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಸಂಬಂಧ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕೇಂದ್ರ ಸರ್ಕಾರ ಅಧೀನದ ಎನ್.ಟಿ.ಪಿ.ಸಿ.(National Thermal Power Corporation) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಿಷಯ ಗಮನಕ್ಕೆ ಬರುತ್ತಿದ್ದಂತೆ, ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿ ಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿದಂತೆ ಪ್ರಸ್ತಾವನೆಯನ್ನು ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುವುದಾಗಿ ಸಂಸದ ರಾಘವೇಂದ್ರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular