HomeKarnatakaOPS ಜಾರಿಯಾಗುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ 'ಬಿಗ್ ಶಾಕ್'

OPS ಜಾರಿಯಾಗುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಿಗ್ ಶಾಕ್’

ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ಹೋರಾಟ ನಡೆಸಿದ್ದು, ಆದರೆ ಇದೀಗ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ ದೊಡ್ಡ ಶಾಕ್ ನೀಡಿದೆ.

ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟವಾಗಿ ಹೇಳಿದ್ದು, ಹೀಗಾಗಿ ಹಳೆ ಪಿಂಚಣಿ ಯೋಜನೆ ಮರು ಜಾರಿಯಾಗುವುದು ಕಷ್ಟ ಸಾಧ್ಯವಾಗಿದೆ.

ಬಿಜೆಪಿಯ ಐಹೊಳೆ ಮಹಾಲಿಂಗಪ್ಪ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಲ ರಾಜ್ಯಗಳು ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಕೂಡ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular