HomeKarnatakaBREAKING NEWS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

BREAKING NEWS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.

ಒಪಿಎಸ್ ಜಾರಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಹಳೆಪಿಂಚಣಿ ಯೋಜನೆ ಜಾರಿ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸಮಿತಿಯ ವರದಿ ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಬಗ್ಗೆ ಭರವಸೆ ನೀಡಿದ್ದೆವು. ನಾವು ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೆ ಬದ್ಧರಾಗಿದ್ದೇವೆ ಎಂದು ಡಿಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular