HomeKarnataka7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಕ್ಕೆ 7 ದಿನ ಗಡುವು: ಮಾ. 1 ರಿಂದಲೇ ಕರ್ತವ್ಯಕ್ಕೆ...

7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಕ್ಕೆ 7 ದಿನ ಗಡುವು: ಮಾ. 1 ರಿಂದಲೇ ಕರ್ತವ್ಯಕ್ಕೆ ಗೈರು ಹಾಜರಾಗಲು ಸರ್ಕಾರಿ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರು 7 ದಿನಗಳ ಗಡುವು ನೀಡಿದ್ದಾರೆ.

ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗೆ ರಾಜ್ಯ ಸರ್ಕಾರಿ ನೌಕರರು ಗಡುವು ನೀಡಿದ್ದು, ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು. ಮಾರ್ಚ್ 1 ರಿಂದಲೇ ಕರ್ತವ್ಯಕ್ಕೆ ಗೈರುಹಾಜರಾಗಲು ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ. ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎ.ಸ್ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಲ್ಲದೇ, ಮಾರ್ಚ್ 1 ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮಾಹಿತಿ ನೀಡಿದ್ದಾರೆ. ಹಳೆ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular