HomeKarnatakaಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂಗೆ ಮನವಿ: ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂಗೆ ಮನವಿ: ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಏಳನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಲಾಗುವುದು. ಸಮಾರಂಭದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಮಾರಂಭದಲ್ಲಿ 50 ಸಾವಿರ ನೌಕರರು ಭಾಗವಹಿಸಲಿದ್ದು, ಅವರಿಗೆಲ್ಲ ಸರ್ಕಾರದ ಒಒಡಿ ಸೌಲಭ್ಯದಡಿ ವಿಶೇಷ ಸಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ, ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಎನ್.ಪಿ.ಎಸ್. ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular