HomeKarnatakaಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ರಾಜಸ್ಥಾನಕ್ಕೆ ಅಧ್ಯಯನ ತಂಡ

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ರಾಜಸ್ಥಾನಕ್ಕೆ ಅಧ್ಯಯನ ತಂಡ

ಎನ್‌ಪಿಎಸ್ ಬದಲಿಗೆ ಹಳೆ ಪಿಂಚಣಿ ವ್ಯವಸ್ಥೆ(ಒಪಿಎಸ್) ಮರು ಜಾರಿಗೊಳಿಸಬೇಕೆಂದು ಸರ್ಕಾರಿ ನೌಕರರ ಬೇಡಿಕೆ ಇಟ್ಟಿದ್ದು, ಈ ಕುರಿತಾಗಿ ಅಧ್ಯಯನ ನಡೆಸಲು ಕರ್ನಾಟಕದ ಅಧಿಕಾರಿಗಳ ತಂಡ ಮಾರ್ಚ್ 25ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದೆ.

ರಾಜಸ್ಥಾನ ಸರ್ಕಾರ 2022ರ ಏಪ್ರಿಲ್ ನಿಂದ ಒಪಿಎಸ್ ಮರು ಜಾರಿಗೊಳಿಸಿದೆ. ಹಲವು ರಾಜ್ಯಗಳಲ್ಲಿಯೂ ಒಪಿಎಸ್ ಮಾಡಲಾಗಿದ್ದು, ಕರ್ನಾಟಕದಲ್ಲಿಯೂ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂದು ನೌಕರರು ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದ ಮೂವರು ಅಧಿಕಾರಿಗಳ ತಂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದೆ. ಉಳಿದ ರಾಜ್ಯಗಳಿಗೂ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಎರಡು ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. 2006ರ ನಂತರ ಸೇವೆಗೆ ಸೇರಿದ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular