HomeKarnatakaಒಪಿಎಸ್ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜು. 29 ರಂದು ಮಹಾನಗರ ಪಾಲಿಕೆ ನೌಕರರ...

ಒಪಿಎಸ್ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜು. 29 ರಂದು ಮಹಾನಗರ ಪಾಲಿಕೆ ನೌಕರರ ಸಾಮೂಹಿಕ ರಜೆ

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜುಲೈ 29ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ನೌಕರರ ಬೇಡಿಕೆಗಳನ್ನು ಜುಲೈ 28 ರೊಳಗೆ ಈಡೇರಿಸುವ ಭರವಸೆ ನೀಡದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸಂಘದ ಅಧ್ಯಕ್ಷ ಅಮೃತರಾಜ್ ಪತ್ರ ಬರೆದಿದ್ದಾರೆ.

7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಸರ್ಕಾರಿ ನೌಕರರಿಗೆ ಬೇಡವಾದ ಹೊಸ ಪಿಂಚಣಿ ಪದ್ಧತಿ ರದ್ದುಪಡಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು. ಕೂಡಲೇ ವೃಂದ ಮತ್ತು ನೇಮಕಾತಿ ನಿಯಮಾವಳಿ ಕರಡು ಅಧಿಸೂಚನೆ ಹೊರಡಿಸಬೇಕು. ಪಾಲಿಗೆ ನೌಕರರಿಗೂ ಕೆಜಿಐಡಿ ಮತ್ತು ಜಿಪಿಎಫ್ ಜಾರಿ ಮಾಡಬೇಕು. ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular