HomeKarnatakaNPS to OPS: ವಿವಿಧ ರಾಜ್ಯದಲ್ಲಿ ಏನಾಗಿದೆ, ಕರ್ನಾಟಕದ ಸರ್ಕಾರಿ ನೌಕರರ ನಿರೀಕ್ಷೆ ಏನು?

NPS to OPS: ವಿವಿಧ ರಾಜ್ಯದಲ್ಲಿ ಏನಾಗಿದೆ, ಕರ್ನಾಟಕದ ಸರ್ಕಾರಿ ನೌಕರರ ನಿರೀಕ್ಷೆ ಏನು?

NPS to OPS ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ. ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಪುನರ್ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಈ ಕುರಿತು ಸರ್ಕಾರಿ ನೌಕರರಿಗೆ ಭರವಸೆ ಕೊಟ್ಟಿತ್ತು.

ವಿವಿಧ ರಾಜ್ಯಗಳಲ್ಲಿ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗಿದೆ. ಈ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಅದನ್ನು ಜಾರಿಗೆ ತರಬೇಕು ಎಂಬುದು ನೌಕರರ ಆಗ್ರಹವಾಗಿದೆ. ಕರ್ನಾಟಕ ಸರ್ಕಾರ ಈ ಕುರಿತು ಇನ್ನು ಅಧಿಕೃತ ತೀರ್ಮಾನ ಕೈಗೊಂಡಿಲ್ಲ.

ಕರ್ನಾಟಕ ಸರ್ಕಾರ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಪುನರ್ ಸ್ಥಾಪನೆ ಮಾಡಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿ ವರದಿ ನೀಡಲು ಸಮಿತಿ ರಚನೆ ಮಾಡಿದೆ. ಈ ಸಮಿತಿಯ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಅಂತಿಮ ತೀರ್ಮಾನ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2026-27ನೇ ಸಾಲಿನ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಘೋಷಣೆ ಮಾಡಲಿದ್ದಾರೆ ಎಂಬುದು ಸರ್ಕಾರಿ ನೌಕರರ ನಿರೀಕ್ಷೆಯಾಗಿದೆ. ಅಷ್ಟರಲ್ಲಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆಯೇ? ಕಾದು ನೋಡಬೇಕಿದೆ.

ಯಾವ ರಾಜ್ಯದಲ್ಲಿ ಏನಾಗಿದೆ?: ರಾಜಸ್ಥಾನ, ಛತ್ತೀಸ್‌ಗಢ, ಪಂಜಾಬ್, ಹಿಮಾಚಲ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯದ ಮಾದರಿಯನ್ನು ಕರ್ನಾಟಕದ ಸರ್ಕಾರಿ ನೌಕರರು ನೀಡುತ್ತಿದ್ದಾರೆ. ಈ ಕುರಿತು ವಿವರವಾದ ವರದಿಯನ್ನು ಸಹ ಸರ್ಕಾರ ರಚನೆ ಮಾಡಿರುವ ಸಮಿತಿಗೆ ಸರ್ಕಾರಿ ನೌಕರರ ಸಂಘ ನೀಡಿದೆ.

  • ರಾಜಸ್ಥಾನ ರಾಜ್ಯದಲ್ಲಿ 2022ರ ಬಜೆಟ್‌ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿತ್ತು. ಆ ಪ್ರಕಾರ ಮರು ಜಾರಿಗೊಳಿಸಲಾಗಿದೆ.
  • ಛತ್ತೀಸ್‌ಗಢ ರಾಜ್ಯದಲ್ಲಿ 20022ರ ಸಚಿವ ಸಂಪುಟ ಸಭೆಯಲ್ಲಿ ಮಾಡಿದ ತೀರ್ಮಾನದಂತೆ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಲಾಗಿದೆ.
  • ಪಂಜಾಬ್ ರಾಜ್ಯದಲ್ಲಿಯೂ 2023ರಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು, ಬಳಿಕ ಅದನ್ನು ಅನುಷ್ಠಾನಗೊಳಿಸಲಾಗಿದೆ.
  • ಹಿಮಾಚಲ ಪ್ರದೇಶ ರಾಜ್ಯದಲ್ಲಿ 2023ರ ಸಚಿವ ಸಂಪುಟ ಸಭೆಯ ಬಳಿಕ ಹಳೆ ಪಿಂಚಣಿ ಯೋಜನೆ ಮರು ಜಾರಿಯಾಗಿದೆ.
  • ಆಂಧ್ರ ಪ್ರದೇಶ ರಾಜ್ಯದಲ್ಲಿ 2024ರಲ್ಲಿ ಎನ್‌ಪಿಎಸ್ ಬದಲು ಪಿಂಚಣಿ ಗ್ಯಾರಂಟಿ ಯೋಜನೆಯನ್ನು ಸರ್ಕಾರಿ ನೌಕರರಿಗಾಗಿ ಜಾರಿಗೊಳಿಸಲಾಗಿದೆ.
  • ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. 2025ರಲ್ಲಿ ಈ ರಾಜ್ಯದಲ್ಲಿ ಎನ್‌ಪಿಎಸ್ ಬದಲು ಗ್ಯಾರಂಟಿ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ.
  • ಜಾರ್ಖಂಡ್ ರಾಜ್ಯ 2023ರಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡುತ್ತೇವೆ ಎಂದು ಘೋಷಣೆ ಮಾಡಿತ್ತು. ಆದರೆ ಇನ್ನೂ ಸಹ ಅದನ್ನು ಜಾರಿಗೊಳಿಸಿಲ್ಲ.

ಕರ್ನಾಟಕದಲ್ಲಿ ಎನ್‌ಪಿಎಸ್ ಅಡಿ 2.93 ಲಕ್ಷ ಸರ್ಕಾರಿ ನೌಕರರು ಇದ್ದಾರೆ. ಇವರನ್ನು ಪುನಃ ಒಪಿಎಸ್ ಅಡಿ ತಂದರೆ ಸರ್ಕಾರದ ಮೇಲೆ ಹೊರೆ ಬೀಳಲಿದೆ ಎಂಬುದು ಲೆಕ್ಕಾಚಾರವಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರ ವಿವಿಧ ರಾಜ್ಯದಲ್ಲಿ ಹೇಗೆ ಒಪಿಎಸ್ ಮರು ಜಾರಿ ಮಾಡಿದೆ? ಎಂದು ಅಧ್ಯಯನ ವರದಿ ಪಡೆದು ಮುಂದಿನ ಹೆಜ್ಜೆ ಇಡಲು ಮುಂದಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒಪಿಎಸ್ ಮರು ಜಾರಿ ಮಾಡಿದರೆ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವೇ ಆಗಲಿದೆ. ಎನ್‌ಪಿಎಸ್ ಅಡಿ ಸರ್ಕಾರ ಮೂರು ಸಾವಿರ ಕೋಟಿ ರೂ. ಹೆಚ್ಚುವರಿ ವಂತಿಕೆಯನ್ನು ಭರಿಸುತ್ತಿದೆ ಎಂದು ಹೇಳಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular