BIG NEWS : ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ‘ಮೊಹರಂ’ ಹಬ್ಬ ನಿಷೇಧಿಸಿ ತಹಶೀಲ್ದಾರ್ ಆದೇಶ

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ತಹಶೀಲ್ದಾರ್   ಸಂಜಯ್ ಕಾಂಬ್ಳೆ  ಆದೇಶ ಹೊರಡಿಸಿದ್ದಾರೆ.

ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ವರ್ಷ 2 ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಮೃತಪಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ 84 ಜನರನ್ನು ಬಂಧಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read