
ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ನಿಗಮದ ಸಾರಿಗೆ ಆದಾಯ ಹಾಗೂ ಇತರ ಆದಾಯವು ಕುಂಠಿತವಾಗಿದ್ದ ಹಿನ್ನೆಲೆಯಲ್ಲಿ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನಗಳನ್ನು ನೀಡಲಾಗಿತ್ತು. ನಂತರ ಜನದಟ್ಟಣೆ ಹೆಚ್ಚಿರುವ ಪೀಕ್ ಸೀಜನ್ಗಳಲ್ಲಿ ವಾಹನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಡಿಸೆಂಬರ್-2022 ರಿಂದ ಜೂನ್-2023 ರ ವರೆಗೆ ಮಾತ್ರ ಸವೇಚನ ರಜೆ ಸೌಲಭ್ಯವನ್ನು ವಿಸ್ತರಿಸಲಾಗಿತ್ತು.
ಪ್ರಸ್ತುತ ಶಕ್ತಿ ಯೋಜನೆ” ಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜುಲೈ-2023 ರಿಂದ ಮುಂದುವರೆದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತೆ ಹೆಚ್ಚುವರಿ ವೇತನವನ್ನು (ಪಾವತಿಸುವುದು ಹಾಗೂ ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಸಿಬ್ಬಂದಿಗಳನ್ನು ಕರ್ತವ್ಯದ ಮೇಲೆ ನಿಯೋಜಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.


