ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಇಂದು ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯಾಗಿ ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮದಿನ ಆಚರಣೆಗೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸ್ವಾತಂತ್ರ ಹೋರಾಟಗಾರ ಶ್ರೀ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನವಾದ ನವೆಂಬರ್ 11 ರಂದು ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯನ್ನಾಗಿ ಆಚರಿಸಲು ಸುತ್ತೋಲೆ ಹೊರಡಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ಮಗುವನ್ನು ಯೋಜನಾ ಬದ್ಧವಾಗಿ ಪರಿಪೂರ್ಣ ನಾಗರೀಕನನ್ನಾಗಿ ರೂಪಿಸುವಲ್ಲಿ ಶಿಕ್ಷಣವು ಅತ್ಯಮೂಲ್ಯವಾಗಿದೆ. ಆದ್ದರಿಂದ ಜಗತ್ತಿನ ಪ್ರತಿ ನಾಗರೀಕ ಸಮಾಜವೂ ಶಾಲಾ-ಕಾಲೇಜು ವ್ಯವಸ್ಥೆಯನ್ನು ನಿರಂತರವಾಗಿ ಸಧೃಢಗೊಳಿಸುತ್ತಿದೆ. ಸ್ವತಂತ್ರ್ಯ ಭಾರತೀಯ ಸಮಾಜದ ನಿರ್ಮಾಣದಲ್ಲಿ ಹಲವು ಮಹನೀಯರು ಶಿಕ್ಷಣದ ಮಹತ್ವವನ್ನು ಸಾರಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ ಹೋರಾಟಗಾರ ಹಾಗೂ ಭಾರತದ ಪ್ರಥಮ ಶಿಕ್ಷಣ ಸಚಿವ ಶ್ರೀ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಜನ್ಮ ದಿನವಾದ ನವೆಂಬರ್ 11ನ್ನು ಭಾರತ ಸರ್ಕಾರವು ಸೆಪ್ಟೆಂಬರ್ 11, 2008 ರಲ್ಲಿ ರಾಷ್ಟ್ರೀಯ ಶಿಕ್ಷಣ ದಿನವೆಂದು ಘೋಷಿಸಿರುತ್ತದೆ.

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಣ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಪ್ರಚುರಪಡಿಸುವ ಸಲುವಾಗಿ ಪ್ರತಿ ವರ್ಷ ಶ್ರೀ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನವಾದ ನವೆಂಬರ್ 11ರಂದು “ರಾಷ್ಟ್ರೀಯ ಶಿಕ್ಷಣ ದಿನಾಚರಣೆ”ಯನ್ನಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂಸ್ಥೆಗಳಲ್ಲಿ ಹಾಗೂ ಕಛೇರಿಗಳಲ್ಲಿ ಆಚರಿಸುವುದು ಅರ್ಥಪೂರ್ಣವೆನಿಸುತ್ತದೆ.

“ರಾಷ್ಟ್ರೀಯ ಶಿಕ್ಷಣ ದಿನಾಚರಣೆ”ಯಂದು ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರದ ಅಭಿವೃದ್ಧಿ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಣದ ಮಹತ್ವ ಮುಂತಾದ ಶಿಕ್ಷಣ ಸಂಬಂಧಿತ ವಿಚಾರಗಳ ಕುರಿತು ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ, ವ್ಯಕ್ತಿತ್ವ ಪರಿಚಯ ಮಾಲಿಕೆಗಳನ್ನು ಆಯೋಜಿಸುವ ಮೂಲಕ “ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯನ್ನು ಅರ್ಥಪೂರ್ಣವಾಗಿ ಆಚರಿಸಲು ಅವಶ್ಯವಿರುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read