BIG NEWS: ಅರಮನೆ ಜಾಗ ಸುಪರ್ದಿಗೆ ಸುಗ್ರೀವಾಜ್ಞೆ ಜಾರಿ: ರಾಜ್ಯಪಾಲರ ಒಪ್ಪಿಗೆಯೊಂದಿಗೆ ಗೆಜೆಟ್ ಅಧಿಸೂಚನೆ

ಬೆಂಗಳೂರು: ಬೆಂಗಳೂರು ಅರಮನೆ ಜಾಗದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಉಳಿಸುವ ಸುಗ್ರೀವಾಜ್ಞೆ ಬುಧವಾರ ಜಾರಿಯಾಗಿದೆ.

ಕಳೆದ ಶುಕ್ರವಾರ ಸಂಪುಟದ ಅನುಮೋದನೆ ಪಡೆದುಕೊಂಡಿದ್ದ ಬೆಂಗಳೂರು ಅರಮನೆ(ಭೂ ಬಳಕೆ ಮತ್ತು ನಿಯಂತ್ರಣ ಸುಗ್ರೀವಾಜ್ಞೆ -2025) ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

ರಸ್ತೆ ವಿಸ್ತರಣೆಗಾಗಿ ಅರಮನೆ ಮೈದಾನದ 15.17 ಎಕರೆ ಬಳಕೆಗೆ ಪರಿಹಾರವಾಗಿ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ 3011 ಕೋಟಿ ರೂ. ಮೊತ್ತದ ಟಿಡಿಆರ್ ಪಾವತಿಸುವ ಹೊಣೆಗಾರಿಕೆಯಿಂದ ಪಾರಾಗಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ಪಡೆದು ರಸ್ತೆಯ ಅಗಲೀಕರಣ ಮಾಡುವುದಕ್ಕೆ ಪ್ರತಿಯಾಗಿ ಮೈಸೂರು ರಾಜ್ಯಮನೆತನದ ವಾರಸುದಾರರಿಗೆ 301 ಕೋಟಿ ರೂ. ಟಿಡಿಆರ್ ಪರಿಹಾರ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶದಿಂದ ಪಾರಾಗಲು ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿತ್ತು.

ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ದೊರೆತಿದೆ. ಬೆಂಗಳೂರು ಅರಮನೆಯನ್ನು ರಾಜ್ಯ ಸರ್ಕಾರ ವಶಪಡಿಸಿಕೊಂಡಿರುವ 1996ರ ಬೆಂಗಳೂರು ಅರಮನೆ ಸ್ವಾಧೀನ ಮತ್ತು ವರ್ಗಾವಣೆ ಕಾಯ್ದೆಗೆ ಪೂರಕವಾಗಿ ಈ ಸುಗ್ರೀವಾಜ್ಞೆ ತರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read