BIG NEWS : ಫೆ.17 ರಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಅನಾವರಣ ಕಾರ್ಯಕ್ರಮ ಆಯೋಜಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಫೆ.17 ರಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, 12 ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಡನಂಬಿಕೆಗಳ ಬಗ್ಗೆ, ವಿರೋಧ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ, ಜಗಜ್ಯೋತಿ ಬಸವಣ್ಣನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ಮಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಉಲ್ಲೇಖಿತ ಆದೇಶದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಲಾಗಿದೆ.

ಈ ಸಂದರ್ಭದಲ್ಲಿ ಶ್ರೀ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ:13.02.2024 ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಿದ್ದಾರೆ. ಅದರಂತೆ ದಿನಾಂಕ:17.02.2024 ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಈ ಮೂಲಕ ಸೂಚಿಸಲಾಗಿದೆ.

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ “ಸಾಂಸ್ಕೃತಿಕ ನಾಯಕ” ರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ತಮ್ಮ ವ್ಯಾಪ್ತಿಯ ಅಧೀನ ಕಚೇರಿಗಳಿಗೆ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಈ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಈ ಮೂಲಕ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಅನಾವರಣಗೊಳಿಸುವ ಭಾವಚಿತ್ರಗಳಲ್ಲಿ ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂಬ ಅಡಿಬರಹ ಮುದ್ರಿಸಿ ಅಳವಡಿಸಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read