ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒ.ಎಸ್.ಡಿ.) ಅವರನ್ನು ಶನಿವಾರ ಸಂಜೆ ಇಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಲೋಕಯುಕ್ತ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಜ್ಯೋತಿ ಪ್ರಕಾಶ್(50) ಮತ್ತು ಇಂಧನ ಸಚಿವರ ಒ.ಎಸ್.ಡಿ. ಮತ್ತು ಅವರ ಕಾರ್ ಚಾಲಕ ನವೀನ್ ಎಂ.(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಎಸಿ ಆಗಿರುವ ಜ್ಯೋತಿ ಪ್ರಕಾಶ್ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯೊಂದಕ್ಕೆ ಎನ್ಒಸಿ ನೀಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಇಂಧನ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಕೆಪಿಟಿಸಿಎಲ್ ಎಸಿ ಜ್ಯೋತಿಪ್ರಕಾಶ್ ಮತ್ತು ಕಾರ್ ಚಾಲಕ ನವೀನ್ ಅವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.