HomeKarnatakaಗೃಹಲಕ್ಷ್ಮಿಯರೇ ಎಚ್ಚರ ಸರ್ವೇ ಹೆಸರಿನಲ್ಲಿ ಒಟಿಪಿ, ಬ್ಯಾಂಕ್ ವಿವರ ಕೇಳಿದ್ರೆ ಕೊಡಬೇಡಿ; ಸರ್ಕಾರದಿಂದ ಮಹತ್ವದ ಸೂಚನೆ

ಗೃಹಲಕ್ಷ್ಮಿಯರೇ ಎಚ್ಚರ ಸರ್ವೇ ಹೆಸರಿನಲ್ಲಿ ಒಟಿಪಿ, ಬ್ಯಾಂಕ್ ವಿವರ ಕೇಳಿದ್ರೆ ಕೊಡಬೇಡಿ; ಸರ್ಕಾರದಿಂದ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು ವಂಚನೆಗೆ ಯತ್ನಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಹಾಗೂ ಸರ್ವೇ ನಡೆಸುವ ನೆಪದಲ್ಲಿ ಕೆಲವರು ಮಹಿಳೆಯರ ಮನೆಗಳಿಗೆ ಭೇಟಿ ನೀಡಿ ಒಟಿಪಿ (OTP), ಬ್ಯಾಂಕ್ ಖಾತೆ ವಿವರ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಕೇಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ.

ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದ ಸರ್ವೇ ಕಾರ್ಯ ನಡೆಯುತ್ತಿದೆ. ಬೆಂಗಳೂರಿನಲ್ಲಿ ಈ ಸಮೀಕ್ಷೆ ಪೂರ್ಣಗೊಂಡಿದೆ ಎನ್ನಲಾಗಿದೆ. ಆದರೆ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸರ್ವೇ ಅಥವಾ ಮರುಪರಿಶೀಲನಾ ಕಾರ್ಯವನ್ನು ಇಲಾಖೆ ಈವರೆಗೆ ಆರಂಭಿಸಿಲ್ಲ.

ಈ ಕುರಿತು ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ಗೃಹಲಕ್ಷ್ಮಿ ಫಲಾನುಭವಿಗಳ ಅರ್ಜಿಗಳ ಮರುಪರಿಶೀಲನೆಯನ್ನು ಸರ್ಕಾರದ ಆದೇಶ ಹಾಗೂ ನಿಗದಿತ ನಿಯಮಗಳ ಪ್ರಕಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://x.com/UvEnglish/status/2116535654150729856?s=20

ಅಧಿಕೃತವಾಗಿ ಮರುಪರಿಶೀಲನೆ ಆರಂಭವಾದ ಸಂದರ್ಭದಲ್ಲಿ ಫಲಾನುಭವಿಗಳ ಗುರುತನ್ನು ದೃಢೀಕರಿಸಲು ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಮೂಲಕ ದೃಢೀಕರಣ ಪ್ರಕ್ರಿಯೆ ನಡೆಸಲಾಗುತ್ತದೆ. ಆದರೆ, ಸದ್ಯಕ್ಕೆ ಇಂತಹ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಒಟಿಪಿ, ಬ್ಯಾಂಕ್ ವಿವರ ಹಂಚಿಕೊಳ್ಳಬೇಡಿ

ಗೃಹಲಕ್ಷ್ಮಿ ಯೋಜನೆಯ ಸರ್ವೇ ಅಥವಾ ಮರುಪರಿಶೀಲನೆ ಹೆಸರಿನಲ್ಲಿ ಮನೆಗೆ ಬರುವ ಅಪರಿಚಿತ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಒಟಿಪಿ, ಬ್ಯಾಂಕ್ ಖಾತೆ ಸಂಖ್ಯೆ, ವೈಯಕ್ತಿಕ ದಾಖಲೆಗಳು ಅಥವಾ ಇತರ ಗೌಪ್ಯ ಮಾಹಿತಿಯನ್ನು ನೀಡಬಾರದು ಎಂದು ಇಲಾಖೆಯ ಉಪನಿರ್ದೇಶಕರು ಮನವಿ ಮಾಡಿದ್ದಾರೆ.

ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದು ಮರುಪರಿಶೀಲನೆ ಪ್ರಕ್ರಿಯೆ ಆರಂಭವಾದ ಬಳಿಕವಷ್ಟೇ ಈ ಕುರಿತು ಮಾಹಿತಿ ನೀಡಲಾಗುತ್ತದೆ. ಅಲ್ಲಿಯವರೆಗೆ ಯೋಜನೆಯ ಹೆಸರಿನಲ್ಲಿ ಮಾಹಿತಿ ಕೇಳುವ ಅಪರಿಚಿತ ವ್ಯಕ್ತಿಗಳ ಕರೆ ಹಾಗೂ ಭೇಟಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಈಗಾಗಲೇ ಇಂತಹ ವಂಚನೆ ಪ್ರಯತ್ನಗಳ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯಾವುದೇ ಆಮಿಷ ಅಥವಾ ಸುಳ್ಳು ಭರವಸೆಗಳಿಗೆ ಮರುಳಾಗಬಾರದು. ತಮ್ಮ ಬ್ಯಾಂಕ್ ಖಾತೆಯ ಸುರಕ್ಷತೆಯ ದೃಷ್ಟಿಯಿಂದ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದೆ ಜಾಗರೂಕರಾಗಿರಬೇಕು ಎಂದು ಇಲಾಖೆ ಎಚ್ಚರಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular