HomeKarnatakaಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೆ. 30ರವರೆಗೆ ಒಟಿಎಸ್ ವಿಸ್ತರಣೆ

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೆ. 30ರವರೆಗೆ ಒಟಿಎಸ್ ವಿಸ್ತರಣೆ

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಒನ್ ಟೈಮ್ ಸೆಟ್ಲ್ಮೆಂಟ್ ಅವಕಾಶವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಸೆಪ್ಟೆಂಬರ್ 30ರವರೆಗೆ ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಬಗ್ಗೆ ಸರ್ಕಾರ ಮತ್ತು ಬಿಬಿಎಂಪಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೊದಲು ಜುಲೈ 31ರವರೆಗೆ ಮಾತ್ರ ಡೆಡ್ ಲೈನ್ ನೀಡಲಾಗಿತ್ತು. ಆಸ್ತಿ ತೆರಿಗೆದಾರದಿಂದ ವಿಸ್ತರಣೆಗೆ ಮನವಿ ಸಲ್ಲಿಕೆ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಸೆ. 30ರವರೆಗೆ ಆಸ್ತಿ ತೆರಿಗೆ ಬಾಕಿ ಪಾವತಿಗೆ ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಸಂಪೂರ್ಣ ಬಡ್ಡಿ ಮನ್ನಾ ಜೊತೆಗೆ ದಂಡದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular