HomeKarnatakaಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ ಹೊಸಕೋಟೆಯಲ್ಲಿ 18500 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಗುಡಿ ಟೌನ್ಶಿಪ್ ಯೋಜನೆಯ ಕುರಿತಂತೆ ಇಂದು ಪರಿಶೀಲನೆ ನಡೆಸಿದೆ. ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಹೊಸ ದಿಕ್ಕಿನತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಸ್ಯಾಟಲೈಟ್ ರಿಂಗ್ ರಸ್ತೆ ಸಾಗುವ ಕಡೆಗೆ ಹೊಸ ಟೌನ್ಶಿಪ್ಗಳನ್ನು ನಿರ್ಮಿಸಿ ಅಗತ್ಯ ಮೂಲಸೌಕರ್ಯ ಒದಗಿಸುವುದು, ರಸ್ತೆ, ರೈಲು ಮೊದಲಾದ ಸಂಪರ್ಕ ನೀಡುವುದು ನಮ್ಮ ಗುರಿಯಾಗಿದೆ. ಈ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ಅತ್ಯುತ್ತಮ ನಗರವಾಗಿಸುವುದು ನಮ್ಮ ಕನಸು’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಅವರು ಇಂದು ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ಇಂದು ರೋಡ್ ಅಲೈನ್ಮೆಂಟ್ಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಹಾಗೆಯೇ ಆನೇಕಲ್, ಹೊಸೂರು ಕಡೆಗೆ ರಸ್ತೆ ವಿಸ್ತೀರ್ಣಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular