ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಪ್ಲೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳು ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾವು ನುಡಿದಂತೆ ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ , ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read