HomeKarnatakaElectricity Bill Hike: 'ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ' : ಮಾಜಿ ಸಿಎಂ...

Electricity Bill Hike: ‘ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ’ : ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಹುಬ್ಬಳ್ಳಿ : ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ, ವಿದ್ಯುತ್ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಹೆಚ್ಚಳ ವರದಿಗೆ ಒಪ್ಪಿಗೆ ನೀಡಿದೆ. ಹಾಗಾಗಿ ವಿದ್ಯುತ್ ದರ ಏರಿಕೆಯಾಗಿದೆ. ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ, ವಿದ್ಯುತ್ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಇತ್ತೀಚೆಗಷ್ಟೇ ವಿದ್ಯುತ್ ದರ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವಿದ್ಯುತ್ ದರ ಏರಿಕೆ ಮಾಡಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಈ ಮೂಲಕ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ವಿದ್ಯುತ್ ದರ ಏರಿಸಿದ್ದು ನಾವಲ್ಲ .ಹಿಂದಿನ ಸರ್ಕಾರದ ಅವಧಿಯಲ್ಲೇ ವಿದ್ಯುತ್ ದರ ಏರಿಕೆ ತೀರ್ಮಾನಿಸಲಾಗಿದೆ ಹೊರತು ನಮ್ಮ ಸರ್ಕಾರ ಮಾಡಿದ್ದಲ್ಲ ಎಂದು ಹೇಳಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular