‘ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ 73,928 ಕೋಟಿ ಖರ್ಚು ಮಾಡಿದೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ 73,928 ಕೋಟಿ ಖರ್ಚು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರದ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ರೂ.73,928 ಕೋಟಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲಾಗಿದೆ. ಇದೇ ಅವಧಿಯಲ್ಲಿ ಹಿಂದಿನ ಸರ್ಕಾರದ ಅನುದಾನಕ್ಕಿಂತ ರೂ. 3,114 ಕೋಟಿ ಹೆಚ್ಚು ವೆಚ್ಚ ಮಾಡಲಾಗಿದೆ.ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನ ಮಟ್ಟ ಸುಧಾರಣೆ ಮತ್ತು ರಾಜ್ಯದ ಅಭಿವೃದ್ಧಿ ಕಾರ್ಯಗಳೆರಡನ್ನೂ ಸಮಾನವಾಗಿ ಮುನ್ನಡೆಸುವ ಮೂಲಕ “ಕರ್ನಾಟಕ ಮಾದರಿ ಆಡಳಿತ”ವೆಂಬ ಹೊಸ ಕಲ್ಪನೆಗೆ ನಾಂದಿಯಾಗಿದ್ದೇವೆ ಎಂದರು.

ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದೆ.
ನನ್ನ ವಿದ್ಯಾರ್ಥಿ ಜೀವನದಲ್ಲಿ ಲೀಲಾವತಿಯವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದವನು. ತನಗೆ ವಹಿಸುವ ಪ್ರತಿ ಪಾತ್ರಕ್ಕೂ ಜೀವತುಂಬುತ್ತಿದ್ದ ಓರ್ವ ಪರಿಪೂರ್ಣ ಕಲಾವಿದೆ. ಇಂದಿಗೂ ಅವರ ನಟನೆ ನನ್ನ ಕಣ್ಣೆದುರೇ ಇದ್ದಂತಿದೆ.

ನಟನೆಯ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ತಾವು ಗಳಿಸಿದ ಹಣದಲ್ಲಿ ನೂರಾರು ಜೀವಗಳಿಗೆ ನೆರವಾದ ಹೃದಯವಂತೆ. ದಯೆಯೇ ಧರ್ಮದ ಮೂಲವಯ್ಯ ಎಂಬ ಮಾತನ್ನು ತಮ್ಮ ಬದುಕಿನಲ್ಲಿ ಯಥಾವತ್ತು ಅಳವಡಿಸಿಕೊಂಡಿದ್ದ ಲೀಲಾವತಿ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read