10 ವರ್ಷಗಳಿಂದ ಬಡವರ ಹಸಿವನ್ನು ತಣಿಸಿರುವ ʻಅನ್ನಭಾಗ್ಯʼ ಮುಂದುವರೆಸಲು ನಮ್ಮ ಸರ್ಕಾರ ಬದ್ಧ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : 10 ವರ್ಷಗಳಿಂದ ಯಶಸ್ವಿಯಾಗಿ ಬಡವರ ಹಸಿವನ್ನು ತಣಿಸಿರುವ ಅನ್ನಭಾಗ್ಯ ಯೋಜನೆ ಮುಂದುವರೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಹಸಿವು ಮುಕ್ತ ಕರ್ನಾಟಕʼ ಧ್ಯೇಯದೊಂದಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 2013ರಲ್ಲಿ ಜಾರಿಗೆ ತಂದ ʼಅನ್ನಭಾಗ್ಯʼ ಯೋಜನೆಗೆ ಈಗ ದಶಮಾನೋತ್ಸವ ಸಂಭ್ರಮ. ಆಗಿನ ಕಾಲಕ್ಕೇ ದೇಶಾದ್ಯಂತ ಸದ್ದು ಮಾಡಿದ್ದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಾಗ ನಾನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವನಾಗಿದ್ದೆ ಅನ್ನೋದೇ ಹೆಮ್ಮೆ ಹಾಗೂ ಸಾರ್ಥಕತೆಯನ್ನು ಮೂಡಿಸಿದೆ ಎಂದು ಹೇಳಿದ್ದಾರೆ.

10 ವರ್ಷಗಳಿಂದ ಯಶಸ್ವಿಯಾಗಿ ಬಡವರ ಹಸಿವನ್ನು ತಣಿಸಿರುವ ಅನ್ನಭಾಗ್ಯ ಯೋಜನೆ ಮುಂದುವರೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ಎಷ್ಟೇ ಅಡ್ಡಿ ಆತಂಕಗಳೂ ಬಂದರೂ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ನಿರಂತರವಾಗಿ ಸಾಗಲಿದೆ.

ಹಸಿದವರಿಗೆ ಅನ್ನ ನೀಡುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ದಶಮಾನೋತ್ಸವ ಆಚರಿಸುತ್ತಿರುವುದಕ್ಕೆ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read