ನವದೆಹಲಿ: ದೇಶದ ರೈತರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೇಂದ್ರವು ಕಬ್ಬಿನ ಎಂಎಸ್ಪಿಯನ್ನು ಪ್ರತಿ ಕ್ವಿಂಟಾಲ್ 25 ರೂ.ಗಳಿಂದ 340 ರೂ.ಗೆ ಹೆಚ್ಚಿಸಿದ ನಂತರ ಪ್ರಧಾನಿ ಮೋದಿ ಈ ಭರವಸೆ ನೀಡಿದ್ದಾರೆ.
ದೇಶಾದ್ಯಂತದ ನಮ್ಮ ರೈತ ಸಹೋದರ ಸಹೋದರಿಯರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರತಿಯೊಂದು ನಿರ್ಣಯವನ್ನು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬು ಖರೀದಿಯ ಬೆಲೆಯಲ್ಲಿ ಐತಿಹಾಸಿಕ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಈ ಕ್ರಮವು ನಮ್ಮ ಕಬ್ಬು ಉತ್ಪಾದಿಸುವ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
देशभर के अपने किसान भाई-बहनों के कल्याण से जुड़े हर संकल्प को पूरा करने के लिए हमारी सरकार प्रतिबद्ध है। इसी कड़ी में गन्ना खरीद की कीमत में ऐतिहासिक बढ़ोतरी को मंजूरी दी गई है। इस कदम से हमारे करोड़ों गन्ना उत्पादक किसानों को लाभ होगा।https://t.co/Ap14Lrjw8Z https://t.co/nDEY8SAC3D
— Narendra Modi (@narendramodi) February 22, 2024

