HomeKarnatakaವಿಕಲಚೇತನರ ಅಭಿವೃದ್ಧಿ, ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ವಿಕಲಚೇತನರ ಅಭಿವೃದ್ಧಿ, ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ವಿಕಲಚೇತನರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಉದ್ಘಾಟಿಸಿದರು.

ವಿಕಲಚೇತನರು ದೇವರ ಮಕ್ಕಳು. ಅವರಿಗೆ ಮನೋಬಲವೇ ಶಕ್ತಿ. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ಅವರು ಅನೇಕ ಸಾಧನೆಗಳನ್ನು ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ. ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಲ್ಲದೆ ಪ್ಯಾರಾ ಒಲಿಂಪಿಕ್ಸ್’ನಲ್ಲಿ ವಿಕಲಚೇತನರು ಹೆಚ್ಚು ಪದಕಗಳನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ. ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular