HomeKarnatakaBIG NEWS : 'ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರೆಯಲಿದೆ' : ಬಾಲಕೃಷ್ಣ...

BIG NEWS : ‘ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರೆಯಲಿದೆ’ : ಬಾಲಕೃಷ್ಣ ಹೇಳಿಕೆಗೆ ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು : ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರೆಯಲಿದೆ, ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಶಾಸಕ  ಬಾಲಕೃಷ್ಣ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಬಾಲಕೃಷ್ಣ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರೆಯಲಿದೆ. ಬಾಲಕೃಷ್ಣ ಅವರು ಎಚ್ಚರಿಕೆಯಿಂದ ಇರಿ ಎಂದಿದ್ದಾರೆ. ಬಿಜೆಪಿಗರು ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಾಲಕೃಷ್ಣ ಹೇಳಿದ್ದಾರೆ ಅಷ್ಟೇ, ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರೆಯಲಿದೆ ಎಂದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ.ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲದಿದ್ದರೆ ಜನರಿಗೆ ಗ್ಯಾರಂಟಿಗಳು ಇಷ್ಟವಿಲ್ಲ ಎಂಬ ಅರ್ಥ ಬರುತ್ತದೆ. ಹೀಗಾಗಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಒಳಿತಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಹೇಳಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular