BIG NEWS : ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು, 3,695 ಆನೆಗಳು ನಮ್ಮಲ್ಲಿವೆ : CM ಸಿದ್ದರಾಮಯ್ಯ

ಬೆಂಗಳೂರು : ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು, 3,695 ಆನೆಗಳು ನಮ್ಮಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ – ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ.ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದರು.

ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಆಂಧ್ರಪ್ರದೇಶದ ಅರಣ್ಯ ಸಚಿವರಾದ ಪವನ್ ಕಲ್ಯಾಣ್ ಅವರು ಆಂಧ್ರ ಸರ್ಕಾರದ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read