ಕೊಯಮತ್ತೂರು: ಭಾನುವಾರ ರಾತ್ರಿ ಕೊಯಮತ್ತೂರಿನಲ್ಲಿ ತನ್ನ ಪ್ರಿಯಕರನೊಂದಿಗೆ ಕಾರ್ ನಲ್ಲಿ ಹೋಗುತ್ತಿದ್ದ 20 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಅಪಹರಿಸಿ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಭಾನುವಾರ ರಾತ್ರಿ 10.30 ರ ಸುಮಾರಿಗೆ ಕೊಯಮತ್ತೂರು ವಿಮಾನ ನಿಲ್ದಾಣದ ಹಿಂಭಾಗದ ಬೃಂದಾವನ ನಗರದಲ್ಲಿ ಜೋಡಿ ಕಾರ್ ನಿಲ್ಲಿಸಿದಾಗ, ಮೂವರು ಪುರುಷರು ಮೊಪೆಡ್‌ನಲ್ಲಿ ಅಲ್ಲಿಗೆ ಬಂದಿದ್ದಾರೆ. ಅವರು ಕಾರಿನ ವಿಂಡ್ ಶೀಲ್ಡ್ ಮುರಿದು ಗೆಳೆಯನ ಮೇಲೆ ಆಯುಧಗಳಿಂದ ಹಲ್ಲೆ ನಡೆಸಿದರು. ಅವರು ಮಹಿಳೆಯನ್ನು ಬೆದರಿಸಿ ತಮ್ಮ ಮೊಪೆಡ್‌ನಲ್ಲಿ ಒಂದು ಕಿಲೋಮೀಟರ್ ದೂರದ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಗಾಯಗೊಂಡ ವ್ಯಕ್ತಿ ಪೀಲಮೇಡು ಪೊಲೀಸರಿಗೆ ಕರೆ ಮಾಡಿ ರಾತ್ರಿ 11 ಗಂಟೆ ಸುಮಾರಿಗೆ ಹುಡುಕಾಟ ಆರಂಭಿಸಿದರು. ಅವರು ಬೆಳಿಗ್ಗೆ 4 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಪತ್ತೆಹಚ್ಚಿದರು. ಆ ಹೊತ್ತಿಗೆ ದಾಳಿಕೋರರು ತಮ್ಮ ಮೊಪೆಡ್ ಅನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಆಕೆಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ನಂತರ ಪೊಲೀಸರು ಮೂವರು ಶಂಕಿತರನ್ನು ಗುರುತಿಸಿದ್ದಾರೆ. ಮಧುರೈ ಜಿಲ್ಲೆಯ ಸತೀಶ್, ಗುಣ ಮತ್ತು ಕಾರ್ತಿಕ್ ಅವರ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಅವರು ದಿನಗೂಲಿ ಕಾರ್ಮಿಕರಾಗಿದ್ದು, ಕೊಯಮತ್ತೂರಿನ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಿದ್ದರು. ಮೂವರನ್ನು ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತ್ಯಾಚಾರಕ್ಕೊಳಗಾದ ಯುವತಿ ಮಧುರೈ ಮೂಲದವಳು ಮತ್ತು ಕೊಯಮತ್ತೂರಿನಲ್ಲಿ ಓದುತ್ತಿದ್ದಳು, ಅಲ್ಲಿ ಅವಳು ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಆಕೆ ಆಘಾತದ ಸ್ಥಿತಿಯಲ್ಲಿದ್ದಾರೆ ಮತ್ತು ಆಕೆಯ ಸ್ನೇಹಿತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅಪರಾಧಿಗಳನ್ನು ಬಂಧಿಸಲು ನಾವು ಏಳು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಎ. ಸರವಣ ಸುಂದರ್ ಹೇಳಿದ್ದಾರೆ.
