ಕೋಲಾರ: ಕಸ ಹಾಕುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ತಂದೆ ಕೊಲೆ ಮಾಡಲಾಗಿದ್ದು, ಮಗನಿಗೆ ಗಂಭೀರ ಗಾಯವಾಗಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಶಾಜು ಖಾನ್ ಮೃತಪಟ್ಟವರು ಎಂದು ಹೇಳಲಾಗಿದೆ. ಮಚ್ಚಿನಿಂದ ಹೊಡೆದು ಕೊಲೆ ಮಾಡಿ ವಾಸೀಂ ಮತ್ತು ಶಬ್ಬೀರ್ ಪರಾರಿಯಾಗಿದ್ದಾರೆ
ಶಾಜು ಖಾನ್ ಪುತ್ರ ಶಹಾಬುದ್ದೀನ್ ಗೆ ಗಂಭೀರ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

