ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಏಕರೂಪ ವೇತನ ಜಾರಿಗೆ ಕ್ರಮ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಎಂಟು ವರ್ಷಗಳ ನಂತರ ನಡೆಯುತ್ತಿರುವ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಸೆಪ್ಟೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜೊತೆಗೆ ಇಲಾಖೆ ಯೋಜನೆಗಳ ಕುರಿತಾಗಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ವರ್ಗಾವಣೆ ಕೌನ್ಸೆಲಿಂಗ್ ಅನ್ನು ಸೆಪ್ಟೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸಬೇಕು. ವೈದ್ಯಾಧಿಕಾರಿಗಳ ಜೇಷ್ಠತಾ ಪಟ್ಟಿ ಸೆಪ್ಟೆಂಬರ್ ಮೊದಲ ವಾರದಲ್ಲಿ ತಯಾರಾಗಬೇಕು. ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಏಕರೂಪ ವೇತನ ಜಾರಿ ಕುರಿತು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು. ಆರೋಗ್ಯ ಸೇವೆಗಳ ಕುರಿತು ಸಾರ್ವಜನಿಕ ದೂರುಗಳಿಗೆ 104 ಸಹಾಯವಾಣಿಗೆ ಪರ್ಯಾಯವಾಗಿ 112 ಸಹಾಯವಾಣಿ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read