ರಾಜ್ಯ ಸರ್ಕಾರದ ಉದ್ಯೋಗ ಮೇಳದಲ್ಲಿ1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಮೇಳದಲ್ಲಿ ಸುಮಾರು 580ಕ್ಕೂ ಅಧಿಕ ಕಂಪನಿಗಳು, 80 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದು,1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲ್ಯಾಭಿವೃದ್ದಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ “ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ” ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದ್ದು, ನಿರುದ್ಯೋಗಿ ಯುವಕ-ಯುವತಿಯರು ಈ ಉತ್ತಮ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ವಿದ್ಯಾವಂತ ನಿರುದ್ಯೋಗಿ ಯುವಜನತೆಗೆ ಯುವ ನಿಧಿ ಯೋಜನೆಯ ಮೂಲಕ ಆರ್ಥಿಕ ಶಕ್ತಿ ತುಂಬುವ ಜೊತೆಗೆ ಲಕ್ಷಾಂತರ ಉದ್ಯೋಗಾವಕಾಶಗಳನ್ನು ಸಹ ಒದಗಿಸಿಕೊಟ್ಟಿದೆ. ಉದ್ಯೋಗ ಸೃಷ್ಟಿಸುವುದರ ಜೊತೆಗೆ ಅಗತ್ಯ ಕೌಶಲ್ಯ ತರಬೇತಿಯನ್ನೂ ಸಹ ನೀಡಲು ಮುಂದಾಗಿದೆ. ಈ ಮೂಲಕ ನಾಡಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪಣ ತೊಟ್ಟಿದ್ದು, ಯುವ ಸಮುದಾಯಕ್ಕೆ ಉತ್ತಮ ಭವಿಷ್ಯ ಕಟ್ಟಿಕೊಡುವಲ್ಲಿ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

80 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದು,1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿವೆ. ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದ್ದು, ನಿರುದ್ಯೋಗಿ ಯುವಕ-ಯುವತಿಯರು ಈ ಉತ್ತಮ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read