HomeIndiaBREAKING: ತಡರಾತ್ರಿ ಕೇರಳ ದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ...

BREAKING: ತಡರಾತ್ರಿ ಕೇರಳ ದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ ಗಾಯ

ಕೇರಳದ ಕಾಸರಗೋಡಿನ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವಘಡ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸಂತ್ರಸ್ತರನ್ನು ರಕ್ಷಣೆ, ಪರಿಹಾರ ಒದಗಿಸಲು ತ್ವರಿತ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular