HomeKarnatakaದೇವರ ಪ್ರಸಾದ ಸೇವಿಸಿ 250ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಮಹಿಳೆ ಸಾವು

ದೇವರ ಪ್ರಸಾದ ಸೇವಿಸಿ 250ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಮಹಿಳೆ ಸಾವು

ಬೆಂಗಳೂರು : ವೈಕುಂಠ ಏಕದಶಿ ಮತ್ತು ಹನುಮ ಜಯಂತಿ ದಿನದಂದು ಪ್ರಸಾದ ಸೇವಿಸಿದ 250 ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ಹಲವರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ವಸ್ಥರನ್ನು ನಗರದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, 36 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ. ಇತರೆ 97 ಮಂದಿಯ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಕೆಲವರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. ಆದರೆ ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಸಿದ್ದಗಂಗಮ್ಮ ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular