ಉದ್ಯೋಗ ವಂಚನೆಗೊಳಗಾಗಿ ಮ್ಯಾನ್ಮಾರ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 280ಕ್ಕೂ ಹೆಚ್ಚು ಭಾರತೀಯರ ರಕ್ಷಣೆ: IAF ವಿಮಾನದ ಮೂಲಕ ಸ್ವದೇಶಕ್ಕೆ

ನವದೆಹಲಿ: ಮ್ಯಾನ್ಮಾರ್‌ನಲ್ಲಿ ನಕಲಿ ಉದ್ಯೋಗ ದಂಧೆ ವಂಚನೆಗೊಳಗಾಗಿದ್ದ ಸುಮಾರು 283 ಭಾರತೀಯ ಪ್ರಜೆಗಳನ್ನು ಯಶಸ್ವಿಯಾಗಿ ರಕ್ಷಿಸಿ ಸ್ವದೇಶಕ್ಕೆ ಕಳುಹಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ(MEA) ಸೋಮವಾರ ದೃಢಪಡಿಸಿದೆ.

ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ನಡುವಿನ ನಿಕಟ ಸಮನ್ವಯದ ಮೂಲಕ, ಸ್ಥಳೀಯ ಅಧಿಕಾರಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ರಕ್ಷಿಸಲ್ಪಟ್ಟ ಜನರನ್ನು ಥೈಲ್ಯಾಂಡ್‌ನ ಮೇ ಸೋಟ್‌ನಿಂದ ಭಾರತೀಯ ವಾಯುಪಡೆಯ(IAF) ವಿಮಾನದಲ್ಲಿ ಭಾರತಕ್ಕೆ ಹಿಂತಿರುಗಿಸಲಾಯಿತು.

ಜನರನ್ನು ಮೋಸಗೊಳಿಸುವ ಉದ್ಯೋಗ ಆಫರ್ ಮೂಲಕ ಮ್ಯಾನ್ಮಾರ್ ಸೇರಿದಂತೆ ಆಗ್ನೇಯ ಏಷ್ಯಾದ ದೇಶಗಳಿಗೆ ಆಮಿಷವೊಡ್ಡಲಾಗಿದೆ ಎಂದು MEA ಹೇಳಿದ್ದು, ಉದ್ಯೋಗದ ಸೋಗಿನಲ್ಲಿ ಕಳ್ಳಸಾಗಣೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಇದು ತೋರಿಸುತ್ತದೆ. ವಿದೇಶಗಳಲ್ಲಿ ಇಂತಹ ಶೋಷಣಾ ಸಂದರ್ಭಗಳಲ್ಲಿ ಸಿಲುಕಿರುವ ತನ್ನ ನಾಗರಿಕರ ಸುರಕ್ಷಿತ ಬಿಡುಗಡೆ ಮತ್ತು ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಭಾರತ ನಿರಂತರ ಮತ್ತು ಪೂರ್ವಭಾವಿ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವಾಲಯ ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read