HomeKarnatakaಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ 32 ಸಾವಿರ ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ 32 ಸಾವಿರ ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದ್ದು, ರಾಜ್ಯಾದ್ಯಂತ32,184 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಯುವನಿಧಿ ಯೋಜನೆಗೆ ನೋಂದಣಿ ಶುರುವಾಗಿ ಹತ್ತುದಿನಗಳಲ್ಲಿ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೆಚ್ಚು ಅರ್ಜಿ ಸಲ್ಲಿಕೆ ಆಗಿವೆ. ಬೆಳಗಾವಿಯಲ್ಲಿ 3,900 ಅರ್ಜಿಗಳು ಸಲ್ಲಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ 2,873 ಅರ್ಜಿಗಳು ಸಲ್ಲಿಕೆಯಾಗಿವೆ. ಬಾಗಲಕೋಟೆ 1,943, ವಿಜಯಪುರ 1,741, ರಾಯಚೂರು 1,714, ರಾಮನಗರ 329, ಚಾಮರಾಜನಗರ 237, ಉಡುಪಿ 236,  ಕೊಡಗು 120,  ಅರ್ಜಿಗಳು ಸಲ್ಲಿಕೆಯಾಗಿವೆ.

ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1  ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹರು:

2023ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು).

ದಾಖಲೆಗಳು:

ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸುವ ವಿಧಾನದ ಕುರಿತು ಈ ವಿಡಿಯೋದಲ್ಲಿದೆ ಸಂಪೂರ್ಣ ಮಾಹಿತಿ

For Latest News Updates, Join Our Whatsapp Community🚩
RELATED ARTICLES

Most Popular