ಜನ್ ಧನ್ ಯೋಜನೆ ಖಾತೆಗಳಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಹಣ ಜಮಾ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಪ್ರಾರಂಭವಾದಾಗಿನಿಂದ 49 ಕೋಟಿಗೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದೆ. ಜನ್ ಧನ್ ಖಾತೆಗಳಿಗೆ ಎರಡು ಲಕ್ಷ ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಡಾ.ಭಾಗವತ್ ಕರದ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ದೇಶದಾದ್ಯಂತ ಜನರಿಗೆ ಬ್ಯಾಂಕಿಂಗ್ ಸೌಲಭ್ಯಗಳಿಗೆ ಸಾರ್ವತ್ರಿಕ ಪ್ರವೇಶವನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು 2014 ರಲ್ಲಿ ಪ್ರಾರಂಭಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.

ಬ್ಯಾಂಕಿಂಗ್ ಔಟ್‌ಲೆಟ್‌ಗಳ ಮೂಲಕ ಬ್ಯಾಂಕ್ ಗ್ರಾಹಕರಿಗೆ ನಗದು ಠೇವಣಿ, ನಗದು ಹಿಂಪಡೆಯುವಿಕೆ, ನಿಧಿ ವರ್ಗಾವಣೆ, ಬ್ಯಾಲೆನ್ಸ್ ವಿಚಾರಣೆ ಮತ್ತು ಮಿನಿ ಸ್ಟೇಟ್‌ಮೆಂಟ್‌ನಂತಹ ಮೂಲಭೂತ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಎಲ್ಲಾ ಜನವಸತಿ ಗ್ರಾಮಗಳ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಸರ್ಕಾರವು ಬ್ಯಾಂಕಿಂಗ್ ಔಟ್ಲೆಟ್ ಗಳ ಲಭ್ಯತೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆರು ಲಕ್ಷಕ್ಕೂ ಹೆಚ್ಚು ಮ್ಯಾಪ್ ಮಾಡಿದ ಜನವಸತಿ ಗ್ರಾಮಗಳ ಪೈಕಿ ಶೇಕಡ 99 ಕ್ಕಿಂತ ಹೆಚ್ಚು ಹಳ್ಳಿಗಳು ಬ್ಯಾಂಕಿಂಗ್ ಔಟ್‌ಲೆಟ್‌ಗೆ ಒಳಪಟ್ಟಿವೆ ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read