HomeKarnatakaSHOCKING : ಕರ್ನಾಟಕದಲ್ಲಿ 7000 ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ HIV ಸೋಂಕು..! ರಾಜ್ಯ ಸರ್ಕಾರದಿಂದ ತುರ್ತು...

SHOCKING : ಕರ್ನಾಟಕದಲ್ಲಿ 7000 ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ HIV ಸೋಂಕು..! ರಾಜ್ಯ ಸರ್ಕಾರದಿಂದ ತುರ್ತು ಕ್ರಮ

ಬೆಂಗಳೂರು :  ಯುವಕರಲ್ಲಿ ಎಚ್‌ಐವಿ ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಇಂಜಿನಿಯರಿಂಗ್, ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜು ಆವರಣದಲ್ಲೇ ಎಚ್‌ಐವಿ ಪರೀಕ್ಷೆ ಹಾಗೂ ಕೌನ್ಸೆಲಿಂಗ್ ಸೇವೆಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಘದ (KSAPS) ಮನವಿಯ ಮೇರೆಗೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಹಾಗೂ ಕಾಲೇಜು ಶಿಕ್ಷಣ ಇಲಾಖೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿವೆ. ವಿದ್ಯಾರ್ಥಿಗಳ ಗೌಪ್ಯತೆಗೆ ಸಂಪೂರ್ಣ ಗೌರವ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಉದ್ದೇಶಕ್ಕಾಗಿ ‘Know Your HIV Status’ ಎಂಬ ಕ್ಯೂಆರ್ ಕೋಡ್ ಆಧಾರಿತ ಆ್ಯಪ್‌ನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ.

ಈ ಹಿಂದೆ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಹಾಗೂ ಕೇಂದ್ರ ಶಿಕ್ಷಣ ಸಚಿವಾಲಯವೂ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಚ್‌ಐವಿ ಕುರಿತು ಜಾಗೃತಿ ಮೂಡಿಸುವಂತೆ ಸೂಚಿಸಿತ್ತು. ಅದರ ಭಾಗವಾಗಿ ರಾಜ್ಯದಾದ್ಯಂತ ಹಲವು ಕಾಲೇಜುಗಳಲ್ಲಿ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಎಚ್‌ಐವಿ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಸೇವೆಗಳನ್ನು ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

HIV ಪ್ರಕರಣಗಳಲ್ಲಿ ದೇಶದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ

ಈ ಯೋಜನೆಗೆ ಸಂಪೂರ್ಣ ಸಹಕಾರ ನೀಡುವಂತೆ ಆರೋಗ್ಯ ಇಲಾಖೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಎಚ್‌ಐವಿ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಅಂಕಿಅಂಶಗಳ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ.

ಸಂಸ್ಥೆಯ ಮಾಹಿತಿಯಂತೆ, ರಾಜ್ಯದಲ್ಲಿ ಒಟ್ಟು 2.60 ಲಕ್ಷ ಮಂದಿ ಎಚ್‌ಐವಿ ಸೋಂಕಿತರಾಗಿದ್ದು, ಅವರಲ್ಲಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ಇರುವುದೇ ತಿಳಿದಿಲ್ಲ. 18ರಿಂದ 25 ವರ್ಷದೊಳಗಿನ ಸುಮಾರು 7 ಸಾವಿರ ಯುವಕರು/ವಿದ್ಯಾರ್ಥಿಗಳು ಎಚ್‌ಐವಿ ಸೋಂಕಿನಿಂದ ಬಳಲುತ್ತಿದ್ದಾರೆ.

18ರಿಂದ 35 ವರ್ಷದ ವಯೋಮಾನದವರಲ್ಲಿ ಸೋಂಕಿನ ಪ್ರಮಾಣ ವೇಗವಾಗಿ ಹೆಚ್ಚುತ್ತಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. 2023–24ರಲ್ಲಿ ಈ ವಯೋಮಾನದ 44,500 ಮಂದಿಗೆ ಎಚ್‌ಐವಿ ಇರುವುದು ದೃಢಪಟ್ಟಿದ್ದು, 2025–26ರ ವೇಳೆಗೆ ಈ ಸಂಖ್ಯೆ 66 ಸಾವಿರಕ್ಕೆ ಏರಬಹುದು ಎಂದು ಅಂದಾಜಿಸಲಾಗಿದೆ.

ವರದಿಗಳ ಪ್ರಕಾರ, ಅಸುರಕ್ಷಿತ ಲೈಂಗಿಕ ಸಂಪರ್ಕ ಹಾಗೂ ಮಾದಕ ವಸ್ತುಗಳ ದುರ್ಬಳಕೆ ಎಚ್‌ಐವಿ ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಆದ್ದರಿಂದ ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಅದರ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular