HomeKarnatakaರಾಜ್ಯ ಸರ್ಕಾರದ ‘ಉದ್ಯೋಗ ಮೇಳ’ಕ್ಕೆ ಭರ್ಜರಿ ರೆಸ್ಪಾನ್ಸ್ : ಈವರೆಗೆ 75,000 ಕ್ಕೂ ಅಭ್ಯರ್ಥಿಗಳು ಹೆಸರು...

ರಾಜ್ಯ ಸರ್ಕಾರದ ‘ಉದ್ಯೋಗ ಮೇಳ’ಕ್ಕೆ ಭರ್ಜರಿ ರೆಸ್ಪಾನ್ಸ್ : ಈವರೆಗೆ 75,000 ಕ್ಕೂ ಅಭ್ಯರ್ಥಿಗಳು ಹೆಸರು ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಮೇಳಕ್ಕೆ ಭರ್ಜರಿ ಯಶಸ್ಸು ಸಿಕ್ಕಿದ್ದು, ಈವರೆಗೆ  75,000 ಕ್ಕೂ ಆಕಾಂಕ್ಷಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಇಂದಿನಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದರು.

ಬೃಹತ್‌ ಉದ್ಯೋಗ ಮೇಳಕ್ಕೆ ಈಗಾಗಲೇ 75 ಸಾವಿರ ಮಂದಿ ನೋಂದಾಣಿಯಾಗಿದ್ದಾರೆ. ಎಸ್‌ ಎಸ್‌ ಎಲ್‌ ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular