ಯಜಮಾನಿಯರೇ ಗಮನಿಸಿ : ಡಿಸೆಂಬರ್ ನಲ್ಲೂ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಹಲವು ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಹಣ ಬಾರದ ಯಜಮಾನಿಯರ ಸಮಸ್ಯೆ ಪರಿಹರಿಸಲು ಮುಂದಾಗಿದೆ.

ಡಿಸೆಂಬರ್ ನಲ್ಲೂ ಹಣ ಬಾರದೇ ಇದ್ದರೆ ಈ ಕೆಲಸ ಮಾಡಿ

ಹೌದು, ಇದುವರೆಗೆ ಕೆಲವು ಮಹಿಳೆಯರ ಖಾತೆಗೆ ಒಂದು ತಿಂಗಳ ಹಣ ಕೂಡ ಜಮಾ ಆಗಿಲ್ಲ. ಕೆಲವರಿಗೆ 1 -2 ತಿಂಗಳ ಹಣ ಮಾತ್ರ ಜಮಾ ಆಗಿದೆ. ಡಿಸೆಂಬರ್ ನಲ್ಲೂ ಹಣ ಬಾರದೇ ಇದ್ದರೆ ನೀವು ತಪ್ಪದೇ ಈ ಕೆಲಸ ಮಾಡಬೇಕು.

ಹಣ ಬಾರದೇ ಇದ್ದರೆ ಇನ್ನು ಮುಂದೆ ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ತಕ್ಷಣವೇ ನೀವು ಅದಾಲತ್ ದೂರು ಸಲ್ಲಿಸಬಹುದು. ಗ್ರಾಮ ಪಂಚಾಯತ್ ಸಿಬ್ಬಂದಿ ನಿಮ್ಮ ಮನೆಗೆ ಬಂದು ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ.

ಯಾರ ಖಾತೆಗೆ ಹಣ ಬಂದಿಲ್ಲವೋ ಅವರ ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಸಮಸ್ಯೆ ಪರಿಹರಿಸಿ ಖಾತೆಗೆ ಹಣ ಜಮಾ ಆಗುವಂತೆ ಮಾಡುತ್ತಾರೆ, ಅಂಗನವಾಡಿ ಸಹಾಯಕಿಯರು ಹಾಗೂ ಗ್ರಾಮ ಪಂಚಾಯತ್ ಕಡೆಯಿಂದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ. ಮಹಿಳೆಯರ ಖಾತೆಗೆ ಹಣ ಜಮಾ ಆಗದೆ ಇದ್ದಲ್ಲಿ ತಾವೇ ಸ್ವತಃ ಬ್ಯಾಂಕಿಗೆ ಕರೆದುಕೊಂಡು ಹೋಗಿ ಹಾಗೂ ಮತ್ತಿತರ ದಾಖಲೆಗಳು ಸರಿಯಾಗಿ ಮಾಡಿಕೊಡುತ್ತಾರೆ.ಅದಾಲತ್ ಪ್ರಕ್ರಿಯೆ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿ ಯಾವ ಮಹಿಳೆಯ ಖಾತೆಗೆ ಹಣ ಜಮಾ ಆಗಿಲ್ಲ ಎನ್ನುವ ವಿವರವನ್ನು ಸರ್ಕಾರಕ್ಕೆ ನೀಡಬೇಕು.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಹಣ ಬಂದಿಲ್ಲವೋ ಅವರಿಗೆ 10 ದಿನದಲ್ಲಿ ಹಣ ಹಾಕುವ ವ್ಯವಸ್ಥೆ ಮಾಡಿ ಎಂದು ಖಡಕ್ ಆಗಿ ಸೂಚನೆ ನೀಡಿದ್ದರು. ಗ್ರಾಮ-ಗ್ರಾಮಗಳಲ್ಲಿ ಅದಾಲತ್ ಗೆ ಇಲಾಖೆ ಸಿದ್ದವಾಗಿದ್ದು, ಅದಾಲತ್ಗೂ ಮುನ್ನಾ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ, ತಾಂತ್ರಿಕ ದೋಷಗಳ ಕಾರಣ ಹುಡುಕಿ ಪೂರಕ ದಾಖಲೆ ಸಂಗ್ರಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read