BREAKING : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು : ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಈ ಬಗ್ಗೆ ಟ್ವಟರ್ ನಲ್ಲಿ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ಟ್ವೀಟ್ ಮಾಡಿದೆ.

ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಈಗಾಗಲೇ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ. ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸುವ ಕೆಲಸ ಇದ್ದರೆ ಬೇಗ ಮಾಡಿ ಮುಗಿಸಿಕೊಳ್ಳಿ.

https://twitter.com/dwcd_kar/status/1699670930279350618?ref_src=twsrc%5Etfw%7Ctwcamp%5Etweetembed%7Ctwterm%5E1699670930279350618%7Ctwgr%5E515f3c8df7288772002294e8c44cc9a756ad3ef3%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-registration-of-grihalakshmi-scheme-suspended-temporarily-state-govt-gruhalakshmi-scheme%2F

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read