ಪಂಚಾಯಿತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಆಸ್ತಿ ತಂತ್ರಾಂಶ ಮುಂದುವರಿಸಲು ನಗರಾಭಿವೃದ್ಧಿ ಇಲಾಖೆ ಆದೇಶ

ಬೆಂಗಳೂರು: ಪೌರ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಗ್ರಾಮ ಪಂಚಾಯಿತಿಗಳ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಳೆದ ವಾರ ಕೈಗೊಂಡ ನಿರ್ದೇಶನ ಆಧರಿಸಿ ಈ ಆದೇಶ ಹೊರಡಿಸಲಾಗಿದೆ. 2017ರ ಮಾರ್ಚ್ 22ಕ್ಕೂ ಮೊದಲಿನ ಆಸ್ತಿಗಳಿಗೆ ಈ ಆದೇಶ ಅನ್ವಯವಾಗುತ್ತದೆ. ಈ ತೀರ್ಮಾನದ ಅನುಷ್ಠಾನದ ಹಂತದಲ್ಲಿ ಯಾವುದೇ ಗೊಂದಲ ಸೃಷ್ಟಿಯಾದಲ್ಲಿ, ಗೊಂದಲ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read