ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ.
ಸಿಎಂ ಕಾವೇರಿ ನಿವಾಸದಲ್ಲಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿ ಸಲ್ಲಿಸಿದರು. ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಸಂಭವಿಸಿತ್ತು.
ಕೋವಿಡ್‌ನ ಎರಡನೇ ಅಲೆ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಸಾವನ್ನಪ್ಪಿದ ದುರಂತ ಸಂಭವಿಸಿತ್ತು.
